alex Certify BIG BREAKING: 15 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ; ಸಚಿವ ನಾಗೇಶ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 15 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ; ಸಚಿವ ನಾಗೇಶ್ ಮಾಹಿತಿ

ಮಂಡ್ಯ: ಯಾವುದೇ ಕಾರಣಕ್ಕೂ ಶಾಲೆ-ಕಾಲೇಜುಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, 1.2 ಕೋಟಿ ಮಕ್ಕಳ ಪೈಕಿ 102 ಮಕ್ಕಳಿಗೆ ಮಾತ್ರ ಸೋಂಕು ತಗುಲಿದೆ. ವಸತಿ ಶಾಲೆಗಳಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದ್ದು, ವಸತಿ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಸೋಂಕು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಶಾಲೆಗಳನ್ನು ನಡೆಸುತ್ತೇವೆ. ಆದರೆ, ಯಾವುದೇ ಕಾರಣಕ್ಕೂ ಶಾಲಾ-ಕಾಲೇಜುಗಳನ್ನು ಮುಚ್ಚುವುದಿಲ್ಲ ಎಂದು ತಿಳಿಸಿದ ಅವರು, ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...