ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ.
ಪೌಷ್ಟಿಕಾಂಶ ಹೆಚ್ಚಳ ಉದ್ದೇಶದಿಂದ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ಆದರೆ, ಪೌಷ್ಟಿಕಾಂಶ ವಿಚಾರದಲ್ಲಿ ಮೊಟ್ಟೆಗೆ ಬಾಳೆಹಣ್ಣು ಸಮನಾಗಿಲ್ಲ ಎನ್ನುವ ಅಭಿಪ್ರಾಯಗಳು ಕೇಳಿಬಂದ ಹಿನ್ನೆಲೆಯಲ್ಲಿ ಶೇಂಗಾ ಮಿಠಾಯಿ(ಚಿಕ್ಕಿ) ನೀಡಲು ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳು ಚಿಕ್ಕಿ, ಬಾಳೆಹಣ್ಣು ನೀಡಲಿದ್ದು, ವಿದ್ಯಾರ್ಥಿಗಳೇ ತಮಗೆ ಬೇಕಾಗಿರುವುದನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಬೇಡಿಕೆಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ವಿವಿಧ ಪರೀಕ್ಷೆಗಳಿಗೆ ಒಳಪಡಿಸಿದ ನಂತರ ಶೇಂಗಾ ಚಿಕ್ಕಿ ವಿತರಿಸಲು ಕರ್ನಾಟಕ ಹಾಲು ಒಕ್ಕೂಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಸಚಿವರು ಹೇಳಿದ್ದಾರೆ.