ಮಡಿಕೇರಿ: ರಾಜ್ಯದ ಪ್ರತಿ ಸರ್ಕಾರಿ ಶಾಲೆಗಳಿಗೆ ಮುಂದಿನ 15 ದಿನಗಳೊಳಗೆ ಸಮವಸ್ತ್ರ, ಶೂ ವಿತರಣೆ ಕಾರ್ಯ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೋಣಿಕೊಪ್ಪದ ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾದ ಪರಿಶಿಷ್ಟ ವರ್ಗ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ 15 ದಿನಗಳೊಳಗೆ ಎಲ್ಲಾ ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ, ಶೂ ವಿತರಣೆ ಕಾರ್ಯ ನಡೆಯಲಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ಸಚಿವರು ಹೇಳಿದ್ದಾರೆ.