ಬೆಂಗಳೂರು: ಶಾಲಾ ಶುಲ್ಕ ವಿನಾಯಿತಿ ಬಗ್ಗೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕುರಿತಾಗಿ ಮಾಹಿತಿ ನೀಡಿದ್ದಾರೆ.
ಹೈಕೋರ್ಟ್ ಶೇಕಡ 15 ರಷ್ಟು ಶುಲ್ಕ ವಿನಾಯಿತಿ ಆದೇಶ ನೀಡಿದೆ. ಸರ್ಕಾರದಿಂದ ಶೇಕಡ 30 ರಷ್ಟು ಶುಲ್ಕ ವಿನಾಯಿತಿ ನೀಡಲಾಗಿತ್ತು. ಖಾಸಗಿ ಶಾಲೆಗಳ ಒಕ್ಕೂಟದಿಂದ ಸರ್ಕಾರದ ಕ್ರಮವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ಹೈಕೋರ್ಟ್ ಶೇಕಡ 15 ರಷ್ಟು ವಿನಾಯಿತಿ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಶೇಕಡ 30 ರಷ್ಟು ವಿನಾಯಿತಿ ನೀಡಬೇಕೆಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು. ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ ಮೇಲ್ಮನವಿ ಸಲ್ಲಿಸುವುದಾಗಿ ಸಚಿವರು ತಿಳಿಸಿದ್ದಾರೆ.