ಬೆಂಗಳೂರು: ಅಕ್ಟೋಬರ್ 21 ರಿಂದ ಒಂದರಿಂದ ಐದನೇ ತರಗತಿ ಆರಂಭವಾಗಲಿದೆ. ಅಂದಿನಿಂದಲೇ ಬಿಸಿಯೂಟ ವಿತರಣೆ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ಶಾಲೆಯ ಆರಂಭಕ್ಕೆ ಸಿಎಂ ಒಪ್ಪಿಗೆ ನೀಡಿದ್ದು, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಆನ್ಲೈನ್ ತರಗತಿಗಳಿಗಿಂತ ಭೌತಿಕ ತರಗತಿಗಳು ಹೆಚ್ಚು ಪರಿಣಾಮಕಾರಿ ಹಿನ್ನೆಲೆಯಲ್ಲಿ ಪೂರ್ಣಪ್ರಮಾಣದಲ್ಲಿ ಶಾಲೆ ಮತ್ತು ಬಿಸಿಯೂಟ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.