alex Certify BIG NEWS: ಶಾಲೆ ಶುರು, 1 – 8 ನೇ ತರಗತಿ ಆರಂಭದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆ ಶುರು, 1 – 8 ನೇ ತರಗತಿ ಆರಂಭದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10 ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರತಿಕ್ರಿಯೆ ನೋಡಿಕೊಂಡು ಒಂದರಿಂದ ಎಂಟನೇ ತರಗತಿಗಳನ್ನು ಸೆಪ್ಟೆಂಬರ್ ನಿಂದ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ಒಂದರಿಂದ ಎಂಟನೇ ತರಗತಿ ಆರಂಭಿಸಲು ಪೋಷಕರಿಂದ ಒತ್ತಡವಿದೆ. ಮಕ್ಕಳಿಗೆ ಕೊರೋನಾದಿಂದ ತೊಂದರೆಯಾಗುವುದಿಲ್ಲ ಎಂದು ಕೋವಿಡ್ ತಾಂತ್ರಿಕ ಸಮಿತಿ ಮತ್ತು ಮಕ್ಕಳ ತಜ್ಞರು ತಿಳಿಸಿದ್ದು, ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಆಗಸ್ಟ್ 30 ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...