ತುಮಕೂರು: ಪ್ರಧಾನಿಗಳ ಆಶಯದಂತೆ ವ್ಯಾಕ್ಸಿನ್ ನೀಡಿ ಶಾಲೆ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಮಾತನಾಡಿದ ಅವರು, ವ್ಯಾಕ್ಸಿನ್ ಹಾಕಿರುವುದರಿಂದ ನಾಲ್ಕನೇ ಎದುರಿಸಲು ಅನುಕೂಲವಾಗಿದೆ. ಅದೇ ಧೈರ್ಯದ ಮೇಲೆ ಶಾಲೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಯಾವ ದೃಷ್ಟಿಯಲ್ಲಿ ಹೇಳಿದ್ದಾರೆಯೋ ನನಗೆ ಗೊತ್ತಿಲ್ಲ ಎಂದು ಸಚಿವರು ತಿಳಿಸಿದ್ದಾರೆ.