ಬೆಂಗಳೂರು: ಬಯಸಿದ ಜಿಲ್ಲೆಗೆ ಶಿಕ್ಷಕರ ವರ್ಗಾವಣೆ ಬಗ್ಗೆ ಪರಿಶೀಲನೆ ನಡೆಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಸೇವಾವಧಿಯಲ್ಲಿ ಒಂದು ಸಲ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಶಿಕ್ಷಕರು ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಬೇಕೆಂದು ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು ಸೇವಾ ಅವಧಿಯಲ್ಲಿ ಒಂದು ಸಲ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಅವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಪತ್ರ ಬರೆದು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.