ಬೆಂಗಳೂರು: ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನ ಸಾರಕ್ಕಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ ಆಯೋಜನೆ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಸುಮಾರು 15 ರಿಂದ 20 ಸಾವಿರ ಶಿಕ್ಷಕರ ಕೊರತೆಯಿದ್ದು, 3 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶೀಘ್ರವೇ 5000 ಶಿಕ್ಷಕರ ನೇಮಕಾತಿಗೆ ಸಿಇಟಿ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.