ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಮುಂದಿನ ವಾರದೊಳಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಕಳೆದ ನವೆಂಬರ್ 6 ರಂದು ನಡೆಸಲಾಗಿದ್ದ ಟಿಇಟಿ ಪರೀಕ್ಷೆಗೆ 3,32,913 ಅಭ್ಯರ್ಥಿಗಳು ಹಾಜರಾಗಿದ್ದು, ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟಿಸಲಾಗಿದೆ. ಮುಂದಿನ ವಾರದೊಳಗೆ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಟಿಇಟಿ ಪರೀಕ್ಷೆ ಪತ್ರಿಕೆ -1 ರಲ್ಲಿ 1,40,801 ಹಾಗೂ ಪತ್ರಿಕೆ -2 ರಲ್ಲಿ 1,92,112 ಮಂದಿ ಸೇರಿ 3,32,913 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು ಎಂದು ಮಾಹಿತಿ ನೀಡಿದ್ದಾರೆ.