ಕಾರವಾರ: ಒಂದರಿಂದ ಐದನೇ ತರಗತಿ ಆರಂಭಕ್ಕೆ ಸಿದ್ಧತೆ ನಡೆದಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿದ ನಂತರವೇ ತರಗತಿಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದರಿಂದ ಐದನೇ ತರಗತಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ತರಗತಿ ಆರಂಭಿಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಕೂಡ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದ ನಂತರವೇ ತರಗತಿಗಳನ್ನು ಆರಂಭಿಸಲಾಗುವುದು ಎಂದು ಹೇಳಲಾಗಿದೆ.
ಶಾಲಾ ಮಕ್ಕಳಿಗೆ ಶೇಕಡ 82 ರಷ್ಟು ಪಠ್ಯಪುಸ್ತಕ ಪೂರೈಕೆ ಮಾಡಲಾಗಿತ್ತು, ಉಳಿದ ಪುಸ್ತಕಗಳನ್ನು ಕೂಡ ಶೀಘ್ರವೇ ಪೂರೈಕೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.