alex Certify BIG NEWS: ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ಧತೆ; ಸಚಿವ ನಾಗೇಶ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ಧತೆ; ಸಚಿವ ನಾಗೇಶ್ ಮಾಹಿತಿ

ಕಾರವಾರ: ಒಂದರಿಂದ ಐದನೇ ತರಗತಿ ಆರಂಭಕ್ಕೆ ಸಿದ್ಧತೆ ನಡೆದಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿದ ನಂತರವೇ ತರಗತಿಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದರಿಂದ ಐದನೇ ತರಗತಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ತರಗತಿ ಆರಂಭಿಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಕೂಡ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದ ನಂತರವೇ ತರಗತಿಗಳನ್ನು ಆರಂಭಿಸಲಾಗುವುದು ಎಂದು ಹೇಳಲಾಗಿದೆ.

ಶಾಲಾ ಮಕ್ಕಳಿಗೆ ಶೇಕಡ 82 ರಷ್ಟು ಪಠ್ಯಪುಸ್ತಕ ಪೂರೈಕೆ ಮಾಡಲಾಗಿತ್ತು, ಉಳಿದ ಪುಸ್ತಕಗಳನ್ನು ಕೂಡ ಶೀಘ್ರವೇ ಪೂರೈಕೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...