ಯಾದಗಿರಿ: ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ಶಾಲೆ ಆರಂಭಿಸುವ ಕುರಿತು ಅವಸರವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಗಿದ ನಂತರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು, ಒಂದರಿಂದ ಐದನೇ ತರಗತಿ ಆರಂಭಿಸಲು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸದ್ಯಕ್ಕೆ ಶಾಲೆ ಆರಂಭಿಸಲು ಅವಸರವೇನಿಲ್ಲ. ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು ನಿರ್ಧಾರ ಕೈಗೊಳ್ಳಲಾಗುವುದು. ಅನುದಾನಿತ ಶಾಲೆಗಳಲ್ಲಿ 30 ರಷ್ಟು ಶುಲ್ಕ ಕಡಿತಕ್ಕೆ ಸರ್ಕಾರ ಆದೇಶ ಹೊರಡಿಸಿದ್ದು, ಹೈಕೋರ್ಟ್ ಶೇಕಡ 15 ಕ್ಕೆ ಇಳಿಕೆ ಮಾಡಿದೆ ಎಂದರು.