alex Certify ಬೊಮ್ಮಾಯಿ 6 ತಿಂಗಳ ಸಿಎಂ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿ.ಸಿ. ಪಾಟೀಲ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೊಮ್ಮಾಯಿ 6 ತಿಂಗಳ ಸಿಎಂ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿ.ಸಿ. ಪಾಟೀಲ್ ತಿರುಗೇಟು

ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಯವರ ಪರಮಾಧಿಕಾರ. ಅವರು ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ ಬಗ್ಗೆ ಪ್ರತಿಕ್ರಿಯೆ ನೀಡಿ ಸತೀಶ್ ಜಾರಕಿಹೊಳಿ ಅವರು ಬಿಜೆಪಿಯಲ್ಲಿ ವಕ್ತಾರರಾಗಿದ್ದಾರಾ…? ಅವರು ಭವಿಷ್ಯ ಹೇಳುವವರಾ…? ಇದರ ಬಗ್ಗೆ ಅವರಿಗೇನು ಗೊತ್ತು? ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಮೂಡಿಸಲು ಅವರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...