ಹಾವೇರಿ: ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ/ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ತಾಂಡಾಗಳಲ್ಲಿ ಮತ ಸಿಕ್ಕಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗೆ ಜನ ಮರುಳಾಗಿದ್ದಾರೆ. ಕಾಂಗ್ರೆಸ್ ಭರವಸೆಗಳ ಮೇಲೆ ನಂಬಿಕೆ ಇಟ್ಟು ಮತ ನೀಡಿದ್ದಾರೆ. ಕೊಟ್ಟ ಮಾತಿನಂತೆ ಕಾಂಗ್ರೆಸ್ ನಾಯಕರು ನಡೆದುಕೊಳ್ಳಬೇಕು. ನಡೆಯದಿದ್ದರೆ ಕಾಂಗ್ರೆಸ್ ವಿರುದ್ಧ ಧರಣಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.