ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಮತ್ತು ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಬಿ.ಸಿ. ಪಾಟೀಲ್ ಅವರು, 7,61,438.86 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಗೀಡಾಗಿದ್ದು, 1.04 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 116.38 ಕೋಟಿ ಜಮಾ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಠಿ ಕಾರಣ ಬೆಳೆ ಹಾನಿಗೆ ಸಂಬಂಧಿಸಿದಂತೆ ಕೇಂದ್ರದ ಅಧಿಕಾರಿಗಳ ತಂಡ ಅಧ್ಯಯನ ನಡೆಸಿದ್ದು, ಮಳೆ ಹಾನಿ ಸಂಬಂಧ 7500 ಕೋಟಿ ರೂ. ಪರಿಹಾರ ಕೇಳಿದ್ದೇವೆ. ಇದುವರೆಗೆ 325 ಕೋಟಿ ರೂ. ಪರಿಹಾರ ಬಂದಿದ್ದು, ಉಳಿದ ಪರಿಹಾರ ಕೂಡ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.