alex Certify ರೈತರಿಗೆ ಕೃಷಿ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್: ಆದಾಯ ದ್ವಿಗುಣಗೊಳಿಸಲು ಉನ್ನತ ಮಟ್ಟದ ಸಮಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಕೃಷಿ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್: ಆದಾಯ ದ್ವಿಗುಣಗೊಳಿಸಲು ಉನ್ನತ ಮಟ್ಟದ ಸಮಿತಿ

ಬೆಂಗಳೂರು: ರಾಜ್ಯದಲ್ಲಿ 2023ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನ‌ ಜಿಕೆವಿಕೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ಯತೆಯ ವಿಸ್ತರಣೆ ಹಾಗೂ ಜನಪ್ರಿಯ ಕಾರ್ಯಕ್ರಮವನ್ನು ಅಳವಡಿಸಲು ಆರ್‌ಕೆವಿವೈ  ಯೋಜನೆಯಡಿ 72‌34 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದ್ದು, ಮುಂಬರುವ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯಡಿಯಲ್ಲಿ ಕೊಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಮತ್ತು ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಗೆ ಶೇ . 3 ರಷ್ಟು ಸಹಾಯಧನ ನೀಡಲಾಗುವುದು. ಈ ಸಂಬಂಧ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳು ಪ್ರಸ್ತಾವನೆಯನ್ನು ನೇರವಾಗಿ ಕೇಂದ್ರ ಸರ್ಕಾರದ (AIF) ಪೋರ್ಟಲ್ ನಲ್ಲಿ ಅಪಲೋಡ್ ಮಾಡಬೇಕು ಅಥವಾ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ವಿವರಿಸಿದರು.

ಕೃಷಿ ವಿಚಕ್ಷಣಾ ದಳದ ಮುಂದುವರೆದ ಜಫ್ತಿ:

2021 ಏಪ್ರಿಲ್ 1 ರಿಂದ ಸೆ.30 ರವರೆಗೆ ಕೃಷಿ ವಿಚಕ್ಷಣಾದಳ 1394 ಕ್ವಿಂಟಾಲ್ ಪ್ರಮಾಣದ 415.78 ಲಕ್ಷ ರೂ. ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಿದ್ದು, 8039 ಟನ್ ಪ್ರಮಾಣದ 145.32 ಲಕ್ಷ ರೂ. ಮೌಲ್ಯದ ರಸಗೊಬ್ಬರ, ಮತ್ತು 4592 ಕೆ.ಜಿ ಪ್ರಮಾಣದ 640 ಲಕ್ಷ ರೂ. ಮೌಲ್ಯದ ಕೀಟನಾಶಕಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 2021-22 ನೇ ಸಾಲಿನಲ್ಲಿ 62615 ಲಕ್ಷ ರೂ. ಮೌಲ್ಯದ ವಿವಿಧ ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ವಿವಿಧ ಜಿಲ್ಲೆಗಳಲ್ಲಿ ಒಪ್ತಿ ಮಾಡಲಾಗಿದೆ.

ಬೆಳೆ ಸಮೀಕ್ಷೆ ವಿವರ:

2021-22ನೇ ಸಾಲಿನಲ್ಲಿ ಸುಮಾರು 25677 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವ ಗುರಿಯಿದ್ದು, ಅಕ್ಟೋಬರ್ 1 ರವರೆಗೆ ಒಟ್ಟು 22805 ತಾಕುಗಳಲ್ಲಿ ಶೇ. 88.81 ರಷ್ಟು ಪೂರ್ವ ಮುಂಗಾರು ಹಾಗೂ ಮುಂಗಾರು ಹಂಗಾಮುಗಳು ಒಳಗೊಂಡಂತೆ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದೆ.

ಬೆಳೆ ವಿಮೆ :

2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಒಟ್ಟು 1280 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿದ್ದು, ಒಟ್ಟು 36 ಬೆಳೆಗಳನ್ನು ಅಧಿಸೂಚಿಸಲಾಗಿದೆ.

ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ :

ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ರೈತರ ಮಕ್ಕಳಿಗೆ ಅನುಕೂಲ ಕಲ್ಪಿಸಲು ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆಯಡಿ ಇದುವರೆವಿಗೂ 8931 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ 2.44 ಕೋಟಿ ರೂ. ವರ್ಗಾಯಿಸಲಾಗಿದೆ.

ರಾಜ್ಯದಲ್ಲಿ ದಾಖಲೆ ಪ್ರಮಾಣದ 158.73 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ

2020-21 ರ ಸಾಲಿನ ರಾಜ್ಯದಲ್ಲಿ ದಾಖಲೆ ಪ್ರಮಾಣದ 158.73 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ  ಉತ್ಪಾದನೆಯಾಗಿದ್ದು, ದೇಶದ ಸರಾಸರಿಗೆ ಹೋಲಿಸಿದರೆ ಶೇಕಡ 2 ರಷ್ಟು ರಾಜ್ಯದ ಸರಾಸರಿಗೆ ಹೋಲಿಸಿದರೆ ಶೇಕಡ 10 ರಷ್ಟು  ಹೆಚ್ಚಿನ ಉತ್ಪಾದನೆಯಾಗಿರುತ್ತದೆ.

ಸುದ್ದಿಗೋಷ್ಠಿಯಲ್ಲಿ ಕೃಷಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಕತ್ರಿ, ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಇಲಾಖಾ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...