
ಹಾವೇರಿ: ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣ ಮಾಡಿದ್ದಲ್ಲಿ ನಾನು ಸರ್ಕಾರದಲ್ಲಿ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ವಿದ್ಯುತ್ ಖಾಸಗೀಕರಣ ವಿರೋಧಿಸಿ, ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಮಾತನಾಡಿದ ಅವರು, ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ನಾನೂ ರೈತರ ಮಗನಾಗಿದ್ದು, ರೈತರ ಸಂಕಷ್ಟ ಅರ್ಥವಾಗುತ್ತದೆ. ಒಂದು ವೇಳೆ ವಿದ್ಯುತ್ ಖಾಸಗೀಕರಣ ಮಾಡಿದರೆ ನಾನು ಸರ್ಕಾರದಲ್ಲಿ ಇರುವುದಿಲ್ಲ. ಕೃಷಿ ಪಂಪ್ಸೆಟ್ ಗಳಿಗೆ 7 ಗಂಟೆ ವಿದ್ಯುತ್ ನೀಡುವ ಕುರಿತು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.