ದಾವಣಗೆರೆ: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ತಕ್ಷಣವೇ ಸರ್ವೇ ಕಾರ್ಯಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಹಾನಿ ವರದಿ ಬಂದ ಕೂಡಲೇ ರೈತರ ಖಾತೆಗೆ ಪರಿಹಾರದ ಹಣ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
NDRF, SDRF ನಿಂದ ಬೆಳೆ ಹಾನಿ ಪರಿಹಾರ ಹಂಚಿಕೆ ಮಾಡಲಾಗುವುದು. ಪರಿಹಾರ ಹಣ ಪರಿಷ್ಕರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಮಾರ್ಗಸೂಚಿ ಬಂದ ನಂತರ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದ್ದು, ಈ ನಿಟ್ಟಿನಲ್ಲಿ ತಕ್ಷಣವೇ ಸರ್ವೇ ಕಾರ್ಯ ಕೈಗೊಂಡು ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.