alex Certify ರೈತರಿಗೆ ಕೃಷಿ ಸಚಿವ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಅಗತ್ಯ ಗೊಬ್ಬರ, ಬೀಜ ದಾಸ್ತಾನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಕೃಷಿ ಸಚಿವ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಅಗತ್ಯ ಗೊಬ್ಬರ, ಬೀಜ ದಾಸ್ತಾನು

ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜಗಳನ್ನು ದಾಸ್ತಾನು ಇರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಅವರು ಇಂದು ಶಿವಮೊಗ್ಗದ ಜಿಲ್ಲಾಡಳಿತ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡುತ್ತಿದ್ದರು.

ಬೀಜ ಮತ್ತು ರಸಗೊಬ್ಬರಗಳನ್ನು ದಾಸ್ತಾನು ಇರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ, ಕಾನೂನುರೀತ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಕೊರೋನಾ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯದಾದ್ಯಂತ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಹಾಗೂ ಬೆಳೆದ ಬೆಳೆಯಿಂದ ರೈತರಿಗೆ ಉಂಟಾಗದಂತೆ ಪ್ರತಿದಿನ ಬೆಳಗ್ಗೆ 6 ರಿಂದ 10 ರವರೆಗೆ ತಮ್ಮ ಕೃಷಿ ಉತ್ಪನ್ನಗಳಾದ ಹೂವು, ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಹಾಗೂ ಬೀಜ ರಸಗೊಬ್ಬರಗಳನ್ನು ಖರೀದಿಸಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ ಎಂದ  ಅವರು, ಜಿಲ್ಲೆಯ ಗಡಿಭಾಗಗಳಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರೈತರು ಯಾವುದೋ ಒಂದೇ ಒಂದು ಬೆಳೆಯನ್ನು ಆಶ್ರಯಿಸದೇ ತಮ್ಮ ಹೊಲಗಳಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ ಅವರು, ಜಿಲ್ಲೆಯ ಕೆಲವು ಭಾಗಗಳಲ್ಲಿ ನಕಲಿ ಸಾವಯವ ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮುಂದಿನ ದಿನಗಳಲ್ಲಿ ನಕಲಿ ಸಾವಯವ ಗೊಬ್ಬರ ಮಾರಾಟ ಮಾಡುವವರನ್ನು ಗುರುತಿಸಿ ಗಂಡನಿಗೆ ಗುರಿಪಡಿಸಲಾಗುವುದು ಎಂದವರು ನುಡಿದರು.

ಕಳೆದ ಸಾಲಿನಲ್ಲಿ ಕ್ರಾಪ್ ಸರ್ವೆ ತಂತ್ರಾಂಶ ಅಭಿವೃದ್ಧಿ ಪಡಿಸಿದ ನಂತರ ರೈತರಿಗೆ ಬಹು ಉಪಯುಕ್ತವಾಗಿದೆ. ಕಳೆದ ಸಾಲಿನಲ್ಲಿ ಕೋಟಿಗೂ ಹೆಚ್ಚು ಜನ ರೈತರು ಕ್ರಾಪ್ ಸರ್ವೆ ನಲ್ಲಿ ಭಾಗವಹಿಸಿದ್ದರು. ಪ್ರಸ್ತುತ ರೈತರಿಗೆ ಉಪಯುಕ್ತವಾಗಿರುವ ಭೂಮಿ ತಂತ್ರಾಂಶವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸದ ಬಿ. ವೈ. ರಾಘವೇಂದ್ರ ಮಾತನಾಡಿ, ಕಳೆದ ಸಾಲಿನಲ್ಲಿ ಜಿಲ್ಲೆಯ 43 ಸಾವಿರಕ್ಕೂ ಹೆಚ್ಚಿನ ಸರಿಗೆ ಗುಣಮಟ್ಟದ  ತಾಡಪಾಲು ಗಳನ್ನು ವಿತರಿಸಿರುವುದು ಹರ್ಷದ ಸಂಗತಿ. ಅಲ್ಲದೆ ಮೊಬೈಲ್ ಮ್ಯಾಪನ್ನು ವಿನ್ಯಾಸಗೊಳಿಸಿ ಬಳಕೆಗೆ ಅನುಕೂಲ ಮಾಡಿಕೊಟ್ಟದ್ದು, ರೈತರಿಗೆ ಉಪಯುಕ್ತವಾಗಿದೆ ಎಂದರು.

ರೈತರಿಗೆ ಅನುಕೂಲವಾಗುವಂತೆ ಪಹಣಿ ಡಾಟಾ ಎಂಟ್ರಿ ಕಾರ್ಯ ತ್ವರಿತವಾಗಿ ವಂತೆ ಅಧಿಕಾರಿಗಳಿಗೆ ಸೂಚಿಸಲು ಔಷಧ ಮತ್ತು ರಸಗೊಬ್ಬರಗಳನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡಲು ರೈತರಿಗೆ ತರಬೇತಿ ನೀಡುವ ಅಗತ್ಯವಿದೆ ಎಂದವರು ನುಡಿದರು.

ಶಾಸಕರಾದ ಕುಮಾರ್ ಬಂಗಾರಪ್ಪ, ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಆರಗ ಜ್ಞಾನೇಂದ್ರ, ಕೆ.ಬಿ. ಅಶೋಕನಾಯ್ಕ, ಎಸ್. ರುದ್ರೇಗೌಡ, ಜಿಲ್ಲಾಧಿಕಾರಿ ಶಿವಕುಮಾರ್ ಹಾಗೂ ಅಧಿಕಾರಿಗಳು ಸಭೆಯಲ್ಲಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...