alex Certify ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆ ನಷ್ಟವಾದಲ್ಲಿ ಪರಿಹಾರ: ಬಿ.ಸಿ.ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆ ನಷ್ಟವಾದಲ್ಲಿ ಪರಿಹಾರ: ಬಿ.ಸಿ.ಪಾಟೀಲ್

ಬೆಳಗಾವಿ(ಸುವರ್ಣಸೌಧ): ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳ ಪೂರೈಕೆಯಿಂದ ರೈತರಿಗೆ ಬೆಳೆ ನಷ್ಟವಾದಲ್ಲಿ ರೈತರು ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿ, ಬೀಜಗಳ ಗುಣಮಟ್ಟದಿಂದ ಬೆಳೆ  ನಷ್ಟವಾಗಿರುವುದು ದೃಢಪಟ್ಟಲ್ಲಿ ನಿಯಮಾನುಸಾರ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ‌.ಪಾಟೀಲ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್.ಎಲ್‌. ಭೋಜೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಪುಸಕ್ತ ಸಾಲಿನಲ್ಲಿ ರೈತರಿಗೆ ನೀಡುವ ಬಿತ್ತನೆ ಬೀಜಗಳ ಗುಣಮಟ್ಟ, ಕಡಿಮೆ ಮತ್ತು ಬೆಳೆ ನಷ್ಟವಾದ  ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ವರದಿಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಕೃಷಿ ಇಲಾಖೆಯಿಂದ ನೀಡುತ್ತಿರುವ ವಿವಿಧ ಬಗೆಯ ಬಿತ್ತನೆ ಬೀಜಗಳನ್ನು ಇಲಾಖಾ ರೈತ ಸಂಪರ್ಕ ಕೇಂದ್ರಗಳು ದಾಸ್ತಾನೀಕರಿಸುವ ಮುನ್ನ ಸಂಬಂಧಪಟ್ಟ ಸಂಸ್ಥೆಗಳು ಬೀಜಗಳ ಗುಣಮಟ್ಟದ ಬಗ್ಗೆ ಖಾತರಿಪಡಿಸಿಕೊಂಡು, ದೃಢೀಕೃತ ಬೀಜಗಳನ್ನು ಮಾತ್ರ ದಾಸ್ತಾನೀಕರಿಸಲಾಗುತ್ತದೆ. ಅಲ್ಲದೆ, ಹಂಗಾಮು ಪೂರ್ವದಲ್ಲಿ ಬೀಜ ವಿತರಣೆಗೂ ಮುನ್ನ ಇಲಾಖೆಯಲ್ಲಿ ದಾಸ್ತಾನೀಕರಿಸಿದ ಬಿತ್ತನೆ ಬೀಜಗಳಲ್ಲಿ ಬೀಜ ಪರಿವೀಕ್ಷಕರು ಬೀಜ ಮಾದರಿಗಳನ್ನು ತೆಗೆದು ವಿಶ್ಲೇಷಣೆಗೊಳಪಡಿಸಿ, ಬೀಜಗಳ ಗುಣಮಟ್ಟವನ್ನು ಖಾತರಿಪಡಿಸಿಕೊಂಡ ನಂತರ, ರೈತರಿಗೆ ವಿತರಿಸಲಾಗುತ್ತಿದೆ. ಒಂದು ವೇಳೆ, ಬೀಜಗಳು ಕಡಿಮೆ ಗುಣಮಟ್ಟದೆಂದು ಕಂಡುಬಂದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗುವುದಿಲ್ಲ ಹಾಗೂ ಅಂತಹ ಸಂಸ್ಥೆಗಳ ವಿರುದ್ಧ ಬೀಜ ಕಾಯ್ದೆಗಳನ್ವಯ ಕ್ರಮ ಕೈಗೊಳ್ಳಲಾಗುತ್ತದೆ.

ಪುಸಕ್ತ ಸಾಲಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಜಿಲೆನ್ಸ್ ತಂಡಗಳು ಮಾರಾಟ ಮಳಿಗೆಗಳ ತಪಾಸಣೆ ಕೈಗೊಂಡು ಅನಧಿಕೃತವಾಗಿ ದಾಸ್ತಾನು ಮಾಡಿದ 19 ಪುಕರಣಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ. 13 ಪ್ರಕರಣಗಳಲ್ಲಿ ಪರವಾನಗಿಗಳನ್ನು ಅಮಾನತು ಮಾಡಲಾಗಿದೆ. 2 ಪಕರಣಗಳಲ್ಲಿ ಪರವಾನಗಿಗಳನ್ನು ರದ್ದು ಮಾಡಲಾಗಿದೆ. ಬಾಕಿ ಉಳಿದ 4 ಪುಕರಣಗಳಿಗೆ ನ್ಯಾಯಲಾಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಈ ಪ್ರಕರಣಗಳಲ್ಲಿ ಒಟ್ಟಾರ 434 ಕ್ವಿಂಟಾಲ್ 62.67 ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿಮಾಡಲಾಗಿದೆ ಎಂದು ಸದಸ್ಯರ ಪ್ರಶ್ನೆಗೆ ನೀಡಿರ ಲಿಖಿತ ಉತ್ತರದಲ್ಲಿ ಸಚಿವರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...