ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಿಸಿಸಿಐ 2021 – 22ರ ಹಣಕಾಸು ವರ್ಷದಲ್ಲಿ ಬರೋಬ್ಬರಿ 1,159 ಕೋಟಿ ರೂಪಾಯಿಗಳ ಆದಾಯ ತೆರಿಗೆ ಪಾವತಿಸುವ ಮೂಲಕ ದಾಖಲೆ ಬರೆದಿದೆ.
ಮಂಗಳವಾರದಂದು ರಾಜ್ಯಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್ ಚೌಧರಿ ಈ ಮಾಹಿತಿ ನೀಡಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಆದಾಯ ತೆರಿಗೆಯಲ್ಲಿ ಶೇಕಡ 37ರಷ್ಟು ಹೆಚ್ಚಾಗಿದೆ ಎಂದು ಮಾಹಿತಿ ನೀಡಿರುವ ಪಂಕಜ್ ಚೌಧರಿ, ಕಳೆದ ಐದು ವರ್ಷಗಳಲ್ಲಿ ಬಿಸಿಸಿಐ ಪಾವತಿಸಿದ ಆದಾಯ ತೆರಿಗೆ ಮತ್ತು ಅದರ ಆದಾಯ ಹಾಗೂ ವೆಚ್ಚದ ವಿವರಗಳನ್ನು ನೀಡಿದ್ದಾರೆ.