alex Certify BIG NEWS: 5 ಮಂದಿ ಬಿಡಿಎ ಇಂಜಿನಿಯರ್ ಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ಮಂದಿ ಬಿಡಿಎ ಇಂಜಿನಿಯರ್ ಗಳು ಅರೆಸ್ಟ್

ಬೆಂಗಳೂರು: ನಕಲಿ ದಾಖಲೆ ಸೃಷ್ಠಿಸಿ ನಿವೇಶನ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಬಿಡಿಎನಲ್ಲಿ ಕೆಲಸ ಮಾಡುತ್ತಿದ್ದ ಐವರು ಇಂಜಿನಿಯರುಗಳನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಸೈಟ್ ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಅನೇಕ ವರ್ಷಗಳಿಂದ ಬಿಡಿಎನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಮೂವತ್ತಕ್ಕೂ ಹೆಚ್ಚು ಸೈಟ್ ಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಿದ್ದಾರೆ. ದಾಖಲೆ ಪರಿಶೀಲನೆ ವೇಳೆ ಇದು ಪತ್ತೆಯಾಗಿದ್ದು, ಆಯುಕ್ತರ ಸೂಚನೆ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು.

ಬಿಡಿಎ ನಗರ ಯೋಜನೆ ವಿಭಾಗದ ಇಂಜಿನಿಯರ್ ಗಳಾದ ಶಂಕರಮೂರ್ತಿ, ಶ್ರೀರಾಮ್, ಶಬ್ಬೀರ್ ಅಹಮ್ಮದ್, ರವಿಕುಮಾರ್, ಶ್ರೀನಿವಾಸ್ ಬಂಧಿತ ಇಂಜಿನಿಯರ್ ಗಳಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...