ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಈಗಾಗಲೇ ಸಕಲ ಸಿದ್ದತೆ ಆರಂಭವಾಗಿದೆ. ಇಂದು ಭಾನುವಾರ ಆಗಿದ್ದರಿಂದ ಹೊಸ ವರ್ಷಾಚರಣೆಗೆ ಸಿದ್ದತೆ ಮಾಡಿಕೊಳ್ಳಲು ಬಹಳಷ್ಟು ಅನುಕೂಲ ಆಗಿದೆ.
ನೀವು ಪಾರ್ಟಿ ಮಾಡಲು, ಸೆಲೆಬ್ರೇಷನ್ ಮಾಡಲು ರೆಡಿ ಆಗ್ತಿದ್ದಂತೆ ಸಂಚಾರಿ ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ. ಒಂದು ವೇಳೆ ನೀವು ಕುಡಿದು ಗಾಡಿ ಚಲಾಯಿಸಿದ್ರೆ ಅಷ್ಟೇ ಕತೆ..ಪೊಲೀಸರು ನಿಮ್ಮ ಗಾಡಿಯನ್ನು ಸೀಜ್ ಮಾಡಿ ಕೇಸ್ ಹಾಕಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಇವತ್ತು ಫುಲ್ ಅಲರ್ಟ್ ಆಗಿದ್ದಾರೆ.
ಡಿ.31ರ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳನ್ನು ಪರಿಶೀಲಿಸಲು ಪೊಲೀಸರು ಬೆಂಗಳೂರಿನಲ್ಲಿ 48 ಚೆಕ್ ಪೋಸ್ಟ್ ಗಳನ್ನು ಗುರುತಿಸಿದ್ದಾರೆ.ಬೆಂಗಳೂರು ನಗರದಾದ್ಯಂತ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಕುಡಿದು ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿಬಿದ್ದರೆ ದಂಡ ವಿಧಿಸಿ ಗಾಡಿಯನ್ನು ಸೀಜ್ ಮಾಡಲಾಗುತ್ತದೆ, ನಂತರ ನೀವು ಕೋರ್ಟ್ ನಲ್ಲಿ ದಂಡ ಪಾವತಿ ಮಾಡಿ ವಾಹನ ಬಿಡಿಸಿಕೊಳ್ಳಬೇಕಾಗುತ್ತದೆ. ನಗರದಾದ್ಯಂತ ಟ್ರಾಫಿಕ್ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ಟೆಸ್ಟ್ ಆರಂಭಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಹೊಸ ವರ್ಷಾಚರಣೆಗಾಗಿ ಬೆಂಗಳೂರಿನ ಪ್ರಮುಖ ಪ್ರದೇಶಗಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ ಪಾರ್ಕ್, ಟ್ರಿನಿಟಿ ಮತ್ತು ಇತರ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. . ಡಿಸಿಪಿಗಳು, ಎಸಿಪಿಗಳು, ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು ಮತ್ತು ಇತರ ಸಿಬ್ಬಂದಿ ಸೇರಿದಂತೆ 8,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.