ಬೆಂಗಳೂರು : ಇನ್ಮುಂದೆ ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೇ, ಅವರಿಗೆ ತೊಂದರೆ ಕೊಟ್ಟರ ಹುಷಾರ್..ನಿಮ್ಮ ಮೇಲೆ ಬೀಳುತ್ತೆ ಕ್ರಿಮಿನಲ್ ಕೇಸ್.
ಹೌದು, ಇನ್ನು ಮುಂದೆ ನಗರದಲ್ಲಿ ತಂದೆ-ತಾಯಿಯನ್ನು ನಿರ್ಲಕ್ಷಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಗರ ಪೊಲೀಸರು ಸಜ್ಜಾಗಿದ್ದಾರೆ. ವಿನಾಕಾರಣ ತಂದೆ-ತಾಯಿಯನ್ನು ನಿರ್ಲಕ್ಷಿಸುವವರು ಹಾಗೂ ತ್ಯಜಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪೋಷಕರ ಕಲ್ಯಾಣ ಮತ್ತು ಹಿರಿಯ ನಾಗರಿಕರ ಕಾಯ್ದೆ 2007ರ ಪ್ರಕಾರ ಪೋಷಕರನ್ನು ನಿರ್ಲಕ್ಷಿಸುವುದು ಅಥವಾ ಅವರನ್ನು ತ್ಯಜಿಸುವುದು ಅಪರಾಧವಾಗಿದೆ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಅವಕಾಶವಿದೆ, ಮಕ್ಕಳು ತಂದೆ ತಾಯಿಗಳನ್ನು ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಮಕ್ಕಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಮಕ್ಕಳನ್ನು ನಿರ್ಲಕ್ಷ್ಯ ಮಾಡುವುದು , ಅವರಿಂದ ದೂರು ಹೋಗುವುದು, ವಯಸ್ಸಾದ ತಂದೆ ತಾಯಿಯನ್ನು ಅನಾಥಾಶ್ರಮಕ್ಕೆ ಸೇರಿಸುವುದು ಮಾಡಿದರೆ ಅಂತಹ ಮಕ್ಕಳಿಗೆ ಪೊಲೀಸರು ಕಾನೂನಿನ ಪಾಠ ಹೇಳಿಕೊಡಲಿದ್ದಾರೆ..ಸೋ..ಬೀ..ಕೇರ್ ಫುಲ್.