Be Alert : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ ಇದ್ದಾರೆ ಬರೋಬ್ಬರಿ 1,436 ನಕಲಿ ವೈದ್ಯರು

ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಕಲೆ ಹಾಕಿದ್ದು, ರಾಜ್ಯದ 31 ಜಿಲ್ಲೆಗಳಲ್ಲಿ ಬರೋಬ್ಬರಿ 1,436 ನಕಲಿ ವೈದ್ಯರು ಇದ್ದಾರೆ ಎಂದು ಮಾಹಿತಿ ನೀಡಿದೆ.

ಬೀದರ್ – 423, ಕೋಲಾರ – 179 ಬೆಳಗಾವಿ – 170ಶಿವಮೊಗ್ಗ – 74, ಬೆಂಗಳೂರು ನಗರ – 67, ಧಾರವಾಡ – 70, ಕಲಬುರಗಿ – 81, ಮಂಡ್ಯ – 33, ಮೈಸೂರು – 2, ಕೊಪ್ಪಳ – 33, ಚಾಮರಾಜನಗರ – 51, ಚಿಕ್ಕಬಳ್ಳಾಪುರ – 45 ಸೇರಿ ಒಟ್ಟು 1,436 ನಕಲಿ ವೈದ್ಯರು ಇದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇನ್ನೂ ಹಲವರು ಡಿಸೆಂಬರ್ ಅಂತ್ಯದ ವೇಳೆಗೆ ಬಲೆಗೆ ಬೀಳುವ ಸಾಧ್ಯತೆಯಿದೆ.

ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮಕೈಗೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ನಕಲಿ ವೈದ್ಯರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ನಕಲಿ ವೈದ್ಯರಿರುವ ಕಡೆಗಳಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ಕಠಿಣ ಕ್ರಮಕೈಗೊಳ್ಳುವಂತೆ ಡಿಎಚ್ಒ(ಆರೋಗ್ಯ ಅಧಿಕಾರಿಗಳು)ಗಳಿಗೆ ಸೂಚನೆ ನೀಡಲಾಗಿದೆ .

ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಪಿಎಂಇ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ.ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಆದೇಶವನ್ನು ಹೊರಡಿಸಿದ್ದು, ನೋಂದಣಿಯನ್ನು ಕಡ್ಡಾಯಗೊಳಿಸಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read