ಕಾರವಾರ: ಹೊಸವರ್ಷಕ್ಕೆ ಉತ್ತರ ಕನ್ನಡ ಜಿಲ್ಲೆಯ ಬೀಚ್ ಗಳನ್ನು ಬಂದ್ ಮಾಡಲಾಗುವುದು. ಬೀಚ್ ಗಳ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದಾರೆ
ಡಿಸೆಂಬರ್ 31ರ ರಾತ್ರಿ 8 ರಿಂದ ಜನವರಿ 1 ರಂದು ಬೆಳಗ್ಗೆ 5 ಗಂಟೆಯವರೆಗೆ ಉತ್ತರ ಕನ್ನಡ ಜಿಲ್ಲೆಯ ಬೀಚ್ ಗಳಲ್ಲಿ ಗುಂಪು ಗೂಡಿ ಹೊಸ ವರ್ಷಾಚರಣೆಗೆ ನಿಷೇಧ ಹೇರಲಾಗಿದೆ. ಕೊರೊನಾ ಸೋಂಕು ಮತ್ತು ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದ ಸಮುದ್ರತೀರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು.
ಆದೇಶ ಉಲ್ಲಂಘಿಸಿದವರ ವಿರುದ್ಧ NDMA ಕೇಸ್ ದಾಖಲಿಸಲಾಗುವುದು. ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.