
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾರ್ಗಲ್ ಸಮೀಪ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ.
ಕಾರ್ಗಲ್ ಸಮೀಪದ ಹೆನ್ನಿ -ಜಾಡ್ಗಲ್ ಬಳಿ ತೋಟದಲ್ಲಿ ಕೆಲಸ ಮಾಡುವ ವೇಳೆ ಘಟನೆ ನಡೆದಿದೆ. ರೈತ ತಿಮ್ಮನಾಯಕ(72) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಕರಡಿ ತಲೆ ಸೇರಿದಂತೆ ದೇಹದ ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ತಿಮ್ಮನಾಯಕ ಗಂಭೀರವಾಗಿ ಗಾಯಗೊಂಡಿದ್ದಾರೆ.