alex Certify ಕೂಲಿ ಕೇಳಿದ್ದಕ್ಕೆ ಯುವಕನ ಕಟ್ಟಿ ಹಾಕಿ ಹಲ್ಲೆ: ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೂಲಿ ಕೇಳಿದ್ದಕ್ಕೆ ಯುವಕನ ಕಟ್ಟಿ ಹಾಕಿ ಹಲ್ಲೆ: ಇಬ್ಬರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ಕೂಲಿ ಹಣ ಕೇಳಿದ ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.

29 ವರ್ಷದ ಯುವಕ ಗಾರೆ ಕೆಲಸ ಮಾಡಿದ್ದ ಕೂಲಿ ಹಣ ಕೇಳಿದ್ದಕ್ಕೆ ಅ. 17ರಂದು ಯುವಕನ ಕೈಕಾಲು ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿದೆ. ಜಾತಿನಿಂದನೆ ಮಾಡಿ ದೌರ್ಜನ್ಯ ಎಸಗಲಾಗಿದೆ. ಗಾಯಗೊಂಡ ಯುವಕನನ್ನು ಬಂಗಾರಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಹಲ್ಲೆ ಮಾಡಿದ ಗ್ರಾಮದ ಜಗದೀಶ್ ಸಿಂಗ್, ರವೀಂದ್ರ ಸಿಂಗ್, ಸತೀಶ್ ಸಿಂಗ್ ಅವರ ವಿರುದ್ಧ ಬಂಗಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಮತ್ತೊಬ್ಬನ ಬಂದನಕ್ಕೆ ಬಲೆ ಬೀಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...