alex Certify ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಯುವತಿ ಮೇಲೆ ಹಲ್ಲೆ ಮಾಡಿದ್ದ ಮ್ಯಾನೇಜರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಯುವತಿ ಮೇಲೆ ಹಲ್ಲೆ ಮಾಡಿದ್ದ ಮ್ಯಾನೇಜರ್ ಅರೆಸ್ಟ್

ಬೆಂಗಳೂರು: ಬಸವನಗುಡಿಯ ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಯುವತಿ ಮೇಲೆ ಹಲ್ಲೆ ಮಾಡಿದ್ದ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಪುರುಷೋತ್ತಮ್ ಬಂಧಿತ ಆರೋಪಿ. ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ತನ್ನನ್ನು ಪ್ರೀತಿಸುವಂತೆ ಆರೋಪಿ ಬಲವಂತ ಮಾಡುತ್ತಿದ್ದ. ಆದರೆ, ಬೇರೆ ಯುವಕನನ್ನು ಪ್ರೀತಿಸುತ್ತಿದ್ದ ಕಾರಣ ಪುರುಷೋತ್ತಮನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪುರುಷೋತ್ತಮ್ ವಿನಾಕಾರಣ ಕೆಲಸದಲ್ಲಿ ತಪ್ಪು ಹುಡುಕಿ ಎಲ್ಲ ಕೆಲಸಗಾರರ ಎದುರಲ್ಲೇ ಯುವತಿಯ ಕಪಾಳಕ್ಕೆ ಬಾರಿಸಿದ್ದು, ಈತನ ಹೊಡೆತಕ್ಕೆ ಯುವತಿ ನೆಲಕ್ಕೆ ಬಿದ್ದಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿ ಜಾಲತಾಣಗಳಲ್ಲಿ ಹರಿದಾಡಿದ್ದು, ಬಸವನಗುಡಿಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...