
ಮಂಡ್ಯ: ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ವ್ಯಕ್ತಿಯೊಬ್ಬ ಕರ್ತವ್ಯನಿರತ ಎಎಸ್ಐ ಮೇಲೆ ಹಲ್ಲೆಗೆ ಮುಂದಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.
ಪಾಂಡವಪುರ ಠಾಣೆ ಎಎಸ್ಐ ಮಹೇಶ್ ಪ್ರಭು ಅವರ ಮೇಲೆ ಶಾಂತಿನಗರ ನಿವಾಸಿ ನಾಗೇಶ್ ಹಲ್ಲೆಗೆ ಯತ್ನಿಸಿದ್ದಾರೆ. ಮಾಸ್ಕ್ ಧರಿಸದಿರುವುದಕ್ಕೆ ದಂಡ ವಿಧಿಸಲು ಮುಂದಾದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲರ್ ಹಿಡಿದು ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆನ್ನಲಾಗಿದ್ದು, ಪಾಂಡವಪುರ ಪಟ್ಟಣ ಠಾಣೆಯಲ್ಲಿ ನಾಗೇಶ್ ವಿರುದ್ಧ ಕೇಸ್ ದಾಖಲಾಗಿದೆ.