ಬಾಗಲಕೋಟೆ: ಬಾಗಲಕೋಟೆ ನಗರದಲ್ಲಿ ಫೇಸ್ಬುಕ್ ನಲ್ಲಿ ಕಮೆಂಟ್ ಹಾಕಿದ್ದ ಯುವಕನೊಂದಿಗೆ ಯುವಕರ ಗುಂಪು ಜಗಳವಾಡಿ, ಚೂರಿಯಿಂದ ಇರಿದ ಘಟನೆ ನಡೆದಿದೆ.
ಹಳೆ ಬಾಗಲಕೋಟೆಯ ಕೃಷ್ಣ ಥಿಯೇಟರ್ ಸಮೀಪ ಶನಿವಾರ ತಡರಾತ್ರಿ ಘಟನೆ ನಡೆದಿದೆ. ಮಾರಣಾಂತಿಕ ಹಲ್ಲೆಗೊಳಗಾಗಿ ಗಾಯಗೊಂಡಿರುವ 26 ವರ್ಷದ ಪ್ರಕಾಶನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕಾಶ್ ಕೈಗೆ ಚೂರಿಯಿಂದ ಇರಿಯಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೇಸ್ಬುಕ್ ನಲ್ಲಿ ಕಾಮೆಂಟ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿ ಚೂರಿಯಿಂದ ಇರಿದಿದ್ದಾರೆ. ಇದು ಖಂಡನೀಯ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ನಾವೇ ಪ್ರತಿಕ್ರಿಯೆ ನೀಡಬೇಕಾಗುತ್ತದೆ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.