alex Certify ಚಲಿಸುತ್ತಿದ್ದ ಬಸ್ ನಲ್ಲೇ ನಡೆದಿದೆ ಬೆಚ್ಚಿಬೀಳಿಸುವ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬಸ್ ನಲ್ಲೇ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಸಮೀಪದ ಆಲೂರು ಕೆಎಂ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ.

ಹುಕ್ಕೇರಿ ತಾಲೂಕಿನ ಬಾಡ ಗ್ರಾಮದ ವಂದನಾ(30) ಹಲ್ಲೆಗೊಳಗಾದ ಮಹಿಳೆ ಎಂದು ಹೇಳಲಾಗಿದೆ. ನಾಗನೂರು ಗ್ರಾಮದ ವಿನೋದ್(28) ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಸಂಕೇಶ್ವರದಿಂದ ಬಾಡ ಗ್ರಾಮಕ್ಕೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ಆಲೂರು ಗ್ರಾಮದ ಬಳಿ ಬಸ್ ಒಳಗೆ ಬಂದ ಆರೋಪಿ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದು, ತಡೆಯಲು ಹೋದ ಸಹಪ್ರಯಾಣಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಂಕೇಶ್ವರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...