ಕಲಬುರಗಿ: ಕಲಬುರ್ಗಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದೆ. ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಮಹಿಳೆಯರನ್ನು ಥಳಿಸಲಾಗಿದೆ.
ತೆಲಂಗಾಣದ ಕೊತ್ಲಾಪುರ ಗ್ರಾಮದಿಂದ ಇಬ್ಬರು ಮಹಿಳೆಯರು ಸಂಬಂಧಿಕರ ಮನೆಗೆ ಬಂದಿದ್ದರು. ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರೂ ಮಹಿಳೆಯರು ಮಕ್ಕಳು ಕಳ್ಳರಿರಬಹುದು ಎಂದು ಭಾವಿಸಿದ ಗ್ರಾಮಸ್ಥರು ಅವರನ್ನು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.