
ತುಮಕೂರು: ಮಾಜಿ ಶಾಸಕ ಸುರೇಶ್ ಗೌಡ ಅವರ ಬಗ್ಗೆ ಪ್ರಚಾರ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ವಿನಯ್ ಮೇಲೆ ಹಲ್ಲೆ ನಡೆಸಲಾಗಿದೆ.
ಸುರೇಶ್ ಗೌಡ ಬೆಂಬಲಿಗ ಕಾಂತರಾಜು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಸುರೇಶಗೌಡ ಅವರ ಬಗ್ಗೆ ಪ್ರಚಾರ ಮಾಡುತ್ತಿಲ್ಲವೆಂದು ಜಿಲ್ಲಾಧ್ಯಕ್ಷರ ಎದುರೇ ಗಲಾಟೆಯಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಕಾಂತರಾಜು ವಿರುದ್ಧ ಹೊಸ ಬಡಾವಣೆ ಠಾಣೆಗೆ ದೂರು ನೀಡಲಾಗಿದೆ.