alex Certify ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ

ದಾವಣಗೆರೆ: ಚಾಕುವಿನಿಂದ ಇರಿದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಘಟನೆ ನಡೆದಿದೆ.

ಗಾಯಾಳು ಮಧು(24) ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬಿಜೆಪಿ ಕಾರ್ಯಕರ್ತರಾದ ಪ್ರವೀಣ್ ಮತ್ತು ಪ್ರಕಾಶ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಹೊನ್ನಾಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಗೆದ್ದ ಹಿನ್ನೆಲೆಯಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸಲಾಗಿದ್ದು, ಪಟಾಕಿ ಹಚ್ಚಿದ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

ಮಾಜಿ ಶಾಸಕ ರೇಣುಕಾಚಾರ್ಯ ಬೆಂಬಲಿಗರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...