alex Certify ಭ್ರಷ್ಟಾಚಾರದ ಬಗ್ಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ, ಮನೆಗೆ ನುಗ್ಗಿ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭ್ರಷ್ಟಾಚಾರದ ಬಗ್ಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ, ಮನೆಗೆ ನುಗ್ಗಿ ಹಲ್ಲೆ

ಬೆಳಗಾವಿ: ಭ್ರಷ್ಟಾಚಾರದ ಬಗ್ಗೆ ಡಿಸಿಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ ನಡೆಸಲಾಗಿದ್ದು, ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬೆಳಗಾವಿ ತಾಲೂಕಿನ ಬೋಡಕೇನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಪಂ ಅಧ್ಯಕ್ಷ ಮತ್ತು ಬೆಂಬಲಿಗರು ಹಲ್ಲೆ ಮಾಡಿದ್ದಾರೆನ್ನಲಾಗಿದೆ. ನೂರಕ್ಕೂ ಹೆಚ್ಚು ಜನರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ನೆರೆ ಸಂತ್ರಸ್ತರ ವಸತಿ ಯೋಜನೆಯಲ್ಲಿ ಗೋಲ್ಮಾಲ್ ನಡೆಸಲಾಗಿದೆ. ಹಣ ಪಡೆದು ಮನೆಗಳನ್ನು ಹಂಚಿಕೆ ಮಾಡಿರುವುದಾಗಿ ಆರೋಪಿಸಿ ನಿನ್ನೆ ಜಿಲ್ಲಾಧಿಕಾರಿಗೆ ಶೆಟ್ಟು ಕಾಳಪ್ಪ ನಾಯಕ್ ದೂರು ನೀಡಿದ್ದರು. ಹೀಗಾಗಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...