
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ವೈದ್ಯ ವೆಂಕಟೇಶ್ ಮೇಲೆ ಹಲ್ಲೆ ಮಾಡಿದ್ದ ಇರ್ಫಾನ್, ತಸೀಮಾ ಬಂಧಿತರು. ಬಂಧಿತರು ಚಿಕ್ಕಮಗಳೂರು ನಗರದ ಟಿಪ್ಪು ಬಡಾವಣೆ ನಿವಾಸಿಗಳಾಗಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಸೇವೆ ಘಟಕದಲ್ಲಿದ್ದ ವೈದ್ಯ ವೆಂಕಟೇಶ್ ಮೇಲೆ ರೋಗಿಯ ಸಹೋದರಿ ತಸೀಮಾ ಮೇಲೆ ಹಲ್ಲೆ ನಡೆಸಿದ್ದು, ಇದನ್ನು ವಿರೋಧಿಸಿ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಒಪಿಡಿ ಬಂದ್ ಮಾಡಿ ಜಿಲ್ಲಾ ಆಸ್ಪತ್ರೆ ಬಳಿ ವೈದ್ಯರು, ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.