ಬೆಂಗಳೂರು: ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಎ.ವಿ. ಕುಮಾರ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿದಾಗ ಜೂಜುಕೋರರು ಹಲ್ಲೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಕೋಟೆ ಮಾರಮ್ಮ ದೇವಾಲಯದ ಬಳಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡ ಹನುಮಂತರಾಜು, ಬೇವಿನಗುಡ್ಡೆಗೌಡ, ಜಗದೀಶ, ಉಮೇಶ, ರಾಜೇಂದ್ರ, ಕುಮಾರ, ಶೇಖರ್, ರಂಗಣ್ಣ, ಗಂಗರಾಜು, ಮುನಿರಾಜು, ಗಿರೀಶ್ ಅವರಿಂದ ಹಲ್ಲೆ ನಡೆದಿದೆ.
ಹಲ್ಲೆ ಮಾಡಿದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಕೋನ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.