
ಕೊಪ್ಪಳ: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಶ್ರೀರಾಮನಗರದ ಬಾರ್ ನಲ್ಲಿ ಘಟನೆ ನಡೆದಿದೆ.
ಶ್ರೀ ರಾಮನಗರದ ಕುಮಾರ್ ರಾಥೋಡ್ ಮೇಲೆ ಅನ್ಯಕೋಮಿನ ಸುಮಾರು 20 ಯುವಕರ ಗುಂಪಿನಿಂದ ಹಲ್ಲೆ ನಡೆಸಲಾಗಿದೆ. ಮದ್ಯ ಸೇವನೆಯ ವೇಳೆ ಜೈ ಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ. ಗಂಗಾವತಿ ಸನ್ ಶೈನ್ ಬಾರ್ ನಲ್ಲಿ ರಾತ್ರಿ ಘಟನೆ ನಡೆದಿದೆ.
ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳು ಕುಮಾರ್ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಂಗಾವತಿ ಗ್ರಾಮೀಣ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.