alex Certify ಪಾರ್ಕ್ ನಲ್ಲಿ ಯುವತಿ ಚುಡಾಯಿಸಿದ್ದಕ್ಕೆ ಬೆತ್ತಲೆ ಮೆರವಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾರ್ಕ್ ನಲ್ಲಿ ಯುವತಿ ಚುಡಾಯಿಸಿದ್ದಕ್ಕೆ ಬೆತ್ತಲೆ ಮೆರವಣಿಗೆ

ಹಾಸನ: ಯುವತಿ ಚುಡಾಯಿಸಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ ಘಟನೆ ಹಾಸನದ ಮಹಾರಾಜ ಪಾರ್ಕ್ ನಲ್ಲಿ ನಡೆದಿದೆ.

ಹಲವು ದಿನಗಳಿಂದ ಯುವತಿಯ ಹಿಂದೆ ಬಿದ್ದಿದ್ದ ಯುವಕ ಮಹಾರಾಜ ಪಾರ್ಕ್ ನಲ್ಲಿ ಯುವತಿ ನಡೆದುಕೊಂಡು ಬರುವಾಗ ಹಿಂದಿನಿಂದ ಬಂದು ಕೈ ಹಿಡಿದು ಎಳೆದಿದ್ದಾನೆ. ಇದನ್ನು ನೋಡುತ್ತಿದ್ದ ಯುವಕರ ಗುಂಪು ಆತನನ್ನು ಹಿಡಿದು ಬೆತ್ತಲೆಗೊಳಿಸಿ ಥಳಿಸಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ ತಡೆಯಲು ಬಂದವರಿಗೆ ಥಳಿಸುವುದಾಗಿ ಬೆದರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಮಾಡಿಕೊಳ್ಳಲಾಗಿದ್ದು, ಅದರಲ್ಲಿ ಕಂಡು ಬಂದಂತೆ ಹಲ್ಲೆ ನಡೆಸಿದ ಎಲ್ಲಾ ಆರೋಪಿಗಳನ್ನು ಬಂಧಿಸಲು ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...