alex Certify ಪೊಲೀಸರ ಮೇಲೆ ಹಲ್ಲೆ ನಡೆಸಿದ 11 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆ ಹಲ್ಲೆ ನಡೆಸಿದ 11 ಮಂದಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಬೈತಕೋಲ್ ಪ್ರದೇಶದಲ್ಲಿ ಶನಿವಾರ ರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲಾಗಿದೆ.

ಪೊಲೀಸ್ ಸಿಬ್ಬಂದಿಗಳಾದ ಗಣೇಶ್, ಹರೀಶ್ ಅವರು ಹಲ್ಲೆಗೊಳಗಾದವರು. ಯುವಕರ ಗುಂಪು ಅವರ ಮೇಲೆ ಹಲ್ಲೆ ಮಾಡಿದ್ದು, ಗಾಯಗೊಂಡ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಸ್ತಿನಲ್ಲಿದ್ದ ಪೊಲೀಸರು ಗುಂಪು ಸೇರಿದ್ದ ಯುವಕರಿಗೆ ಮನೆಗೆ ಹೋಗುವಂತೆ ಬುದ್ಧಿವಾದ ಹೇಳಿದ್ದಾರೆ. ಈ ವೇಳೆ ಯುವಕರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.

ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಸುನಿಲ್ ಗೌಡ, ಮಂಜುನಾಥಗೌಡ, ಸಂದೇಶ ರಘುವೀರ್, ನಿತಿನ್, ಗಗನ್ ಗೌಡ, ಉಮೇಶ್, ವೀರೇಶ್ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...