ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಹಿನ್ನೆಲೆಯಲ್ಲಿ ಲೈಂಗಿಕ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ ಘಟನೆ ಮೆಜೆಸ್ಟಿಕ್ ನಲ್ಲಿ ನಡೆದಿದ್ದು, ಮೂವರು ಅಪರಿಚಿತರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 15ರಂದು ಘಟನೆ ನಡೆದಿದ್ದು, 32 ವರ್ಷದ ಮಹಿಳೆ ದೂರು ನೀಡಿದ್ದಾರೆ. ಪತಿಯಿಂದ ದೂರವಾಗಿರುವ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದು, ಜೀವನ ನಡೆಸಲು ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಗ್ರಾಹಕರಿಗಾಗಿ ಕಾಯುತ್ತಿದ್ದ ಅವರಿಗೆ ಜೂನ್ 15 ರಂದು ಸಂಜೆ 7 ಗಂಟೆಗೆ ಮೂವರು ಯುವಕರು ಲೈಂಗಿಕ ಕ್ರಿಯೆಗೆ ಬರುವಂತೆ ಕರೆದಿದ್ದಾರೆ. ಆದರೆ. ಅವರು ಚಿಕ್ಕವರಾಗಿದ್ದ ಕಾರಣ ಹೋಗಲು ಮಹಿಳೆ ನಿರಾಕರಿಸಿದ್ದಾರೆ.

ನಂತರ ಬೇರೆ ಮಹಿಳೆ ಬಳಿ ಬಂದ ಅವರು ಆಕೆಯನ್ನು ಕರೆದಿದ್ದು, ಆಕೆಯೂ ಕೂಡ ಚಿಕ್ಕವರೆಂಬ ಕಾರಣದಿಂದ ಹೋಗಲು ನಿರಾಕರಿಸಿದಾಗ ಜಗಳವಾಡಿ ಹಲ್ಲೆ ನಡೆಸಿದ್ದಾರೆ. ಕಟ್ಟಿಗೆಯಿಂದ ಮಹಿಳೆ ತಲೆಗೆ ಹೊಡೆದಿದ್ದು, ಜನ ಸೇರುತ್ತಿದ್ದಂತೆ ಪರಾರಿಯಾಗಿದ್ದಾರೆ. ತಲೆಗೆ ಪೆಟ್ಟಾಗಿದ್ದ ಮಹಿಳೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಪಿಗಳು ಚಿಕ್ಕವರಾಗಿದ್ದು, ಅವರ ಭವಿಷ್ಯದ ದೃಷ್ಟಿಯಿಂದ ಅವರೊಂದಿಗೆ ಹೋಗಿರಲಿಲ್ಲ. ಹೀಗಾಗಿ ಹಲ್ಲೆ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read