
ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದ ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ.
ಸಾಗರ್ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪಾಂಡವಪುರ ಪೊಲೀಸ್ ಠಾಣೆಗೆ ಸಾಗರ್ ವಿರುದ್ಧ ದೂರು ಬಂದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸಾಗರ್ ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಪೊಲೀಸ್ ಸಿಬ್ಬಂದಿ ಅಭಿಷೇಕ್ ಮತ್ತು ಸಾಗರ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸ್ ಕಾನ್ಸ್ಟೇಬಲ್ ಅಭಿಷೇಕ್ ಗೆ ಸಾಗರ್ ಹೊಡೆದು ಆವಾಜ್ ಹಾಕಿದ್ದಾನೆ. ಹಲ್ಲೆ ಮಾಡಿ ಠಾಣೆಯಿಂದ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಜರುಗಿಸಿದ್ದಾರೆ.