alex Certify ಬೀಚ್ ನಲ್ಲಿ ಜೊತೆಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನಾಲ್ವರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀಚ್ ನಲ್ಲಿ ಜೊತೆಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನಾಲ್ವರು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿ ಆರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ.

ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳ ಮೇಲೆ ಗುಂಪೊಂದು ದಾಳಿ ನಡೆಸಿದೆ. ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿಹಾರಕ್ಕಾಗಿ ಸೋಮೇಶ್ವರ ಬೀಚ್ ಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿಗಳು ಭಿನ್ನ ಕೋಮಿಗೆ ಸೇರಿದವರು. ಇವರನ್ನು ಗಮನಿಸಿದ ಗುಂಪು ಹಿಂಬಾಲಿಸಿ ವಿಹಾರ ನಡೆಸುವಾಗ ಹಲ್ಲೆ ಮಾಡಿದೆ.

ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿನಿಯರು ಊರಿಗೆ ತೆರಳಿದ್ದಾರೆ. ಉಳ್ಳಾಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹಿಂದೂ ಯುವತಿಯರೊಂದಿಗೆ ಬಂದಿದ್ದ ಹಿನ್ನೆಲೆಯಲ್ಲಿ ಅನ್ಯಕೋಮಿನ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ತನಿಖೆಗಾಗಿ ಪೊಲೀಸರು ಎರಡು ತಂಡ ರಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...