
ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ವ್ಯಕ್ತಿಯ ದರೋಡೆ ನಡೆಸಿ ಚಾಕುವಿನಿಂದ ಇರಿದ ಘಟನೆ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಸಮೀಪ ನಡೆದಿದೆ.
ಶಿವಕುಮಾರ್ ಅವರ ಮೊಬೈಲ್ ಮತ್ತು ಹಣ ಕಸಿದುಕೊಂಡ ಗ್ಯಾಂಗ್ ಸಿಮ್ ವಾಪಸ್ ಕೊಡಿ ಎಂದು ಕೇಳಿದ್ದಕ್ಕೆ ಸಿಟ್ಟಿಗೆದ್ದು ಹಲ್ಲೆ ಮಾಡಿದ್ದಾರೆ. ಮೂವರು ದುಷ್ಕರ್ಮಿಗಳು ಶಿವಕುಮಾರ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ಶಿವಕುಮಾರ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.