alex Certify ಹಾಡಹಗಲೇ ಆಘಾತಕಾರಿ ಘಟನೆ: ಹಂತಕರಿಂದ ಕೂದಲೆಳೆ ಅಂತರದಲ್ಲಿ ಪಾರಾದ ಜೆಸಿಬಿ ನಾರಾಯಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಆಘಾತಕಾರಿ ಘಟನೆ: ಹಂತಕರಿಂದ ಕೂದಲೆಳೆ ಅಂತರದಲ್ಲಿ ಪಾರಾದ ಜೆಸಿಬಿ ನಾರಾಯಣ

ಬೆಂಗಳೂರು: ರೌಡಿಶೀಟರ್ ಜೆಸಿಬಿ ನಾರಾಯಣನ ಹತ್ಯೆಗೆ ಹಂತಕರು ಪ್ರಯತ್ನ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ.

ನಡುರಸ್ತೆಯಲ್ಲೇ ಮಾರಕಾಸ್ತ್ರಗಳೊಂದಿಗೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಡಿಎಲ್ಎಫ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಹಂತಕರಿಂದ ಪಾರಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಡುರಸ್ತೆಯಲ್ಲಿ ಕಾರ್ ನಿಂದ ಡಿಕ್ಕಿ ಹೊಡೆಸಿ ನಾರಾಯಣನನ್ನು ಹತ್ಯೆ ಮಾಡಲು ಪ್ರಯತ್ನ ನಡೆಸಲಾಗಿದೆ. ನಾರಾಯಣ ಕಾರ್ ನಲ್ಲಿ ಬರುವಾಗ ಅಡ್ಡಗಟ್ಟಿ ಮಾರಕಾಸ್ತ್ರದಿಂದ ದಾಳಿ ಮಾಡಲು ಯತ್ನಿಸಲಾಗಿದೆ. ನಾರಾಯಣ ವೇಗವಾಗಿ ಕಾರ್ ರಿವರ್ಸ್ ತೆಗೆದುಕೊಂಡು ಪರಾರಿಯಾಗಿದ್ದಾನೆ. ಪಾರಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...