
ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ.
ಕೋಡ್ಲಾಪುರ ಗ್ರಾಮ ಪಂಚಾಯಿತಿ ಸದಸ್ಯ ರಂಗನಾಥ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. ರಂಗನಾಥ್ ಅವರ ಬೈಕ್ ಅಡ್ಡಗಟ್ಟಿ ಹಣ ಕೇಳಲಾಗಿದ್ದು, ಹಣ ಕೊಡದಿದ್ದಾಗ ಬೆದರಿಸಿ ಅವರ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಮಧುಗಿರಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.