alex Certify 10 ನೇ ತರಗತಿ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಗುಡ್ ನ್ಯೂಸ್: BECIL ನಲ್ಲಿ ಉದ್ಯೋಗಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ನೇ ತರಗತಿ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಗುಡ್ ನ್ಯೂಸ್: BECIL ನಲ್ಲಿ ಉದ್ಯೋಗಾವಕಾಶ

ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನಲ್ಲಿ 463 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ ಮತ್ತು 10ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳಿಗನುಸಾರ ವಯೋಮಿತಿ ನಿಗದಿಪಡಿಸಲಾಗಿದೆ. ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 15,000 ರೂ.ನಿಂದ 1,00,000 ರೂ. ವರೆಗೆ ವೇತನವನ್ನು ನೀಡಲಾಗುವುದು.

ಸಾಮಾನ್ಯ/ಓಬಿಸಿ/ಮಾಜಿ ಸೈನಿಕ ಅಭ್ಯರ್ಥಿಗಳು 955 ರೂ. ಮತ್ತು .ಜಾ/.ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 670 ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು, ಅರ್ಜಿ ಸಲ್ಲಿಕೆ, ಮಾಹಿತಿಗಾಗಿ ಬಿಇಸಿಐಎಲ್ ಅಧಿಕೃತ ವೆಬ್ಸೈಟ್  https://www.becil.com ಗೆ ಭೇಟಿ ನೀಡಬಹುದು. ಏಪ್ರಿಲ್ 22 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...