ಬೆಂಗಳೂರು: ನೂತನ ಪದವಿ ಮತ್ತು ಪಿಜಿ ಕೋರ್ಸ್ ಗಳಿಗೆ ಯುಜಿಸಿ ಸರ್ಜರಿ ಮಾಡಿ ಹೊಸ ಸ್ವರೂಪ ಪ್ರಕಟಿಸಿದ್ದು, ಕೆಲವು ಕೋರ್ಸ್ ಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಎಂಸಿಎ ಕೋರ್ಸ್ ಅವಧಿ ಎರಡು ವರ್ಷ ಎಂದು ಸ್ಪಷ್ಟಪಡಿಸಲಾಗಿದೆ. ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನ್ವಯ ಬಿಎಡ್ ನಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ ಐದು ವರ್ಷ ವಿಸ್ತರಿಸಲಾಗುವುದು ಎನ್ನಲಾಗಿದೆ
ಇನ್ನು ಉನ್ನತ ಶಿಕ್ಷಣ, ಐಟಿ-ಬಿಟಿ, ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ಬಿಎಡ್ ಕೋರ್ಸ್ ನಲ್ಲಿ ಆಮೂಲಾಗ್ರ ಬದಲಾವಣೆ ಮಾಡಿ 5 ವರ್ಷ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.